ತುಮಕೂರು: ರಾಜ್ಯದ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ನಡೆದಿದೆ.
50 ವರ್ಷದ ಟಿ.ಎನ್.ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ. ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವ ರೀತಿಯಲ್ಲಿ ಪ್ರಸಾದ್ ಶವ ಪತ್ತೆಯಾಗಿದೆ.
ಸಾಲಭಾದೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.