ಮಂಗಳೂರು: ಮೃತ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿ, ನೆಟ್ಟಾರು ಕುಟುಂಬಸ್ಥರ ಸಂಕಷ್ಟ ಆಲಿಸಿದರು. ಈ ವೇಳೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಿಎಂ, ಪ್ರವೀಣ್ ನೆಟ್ಟಾರು ಕುಟುಂಬದ ಕಷ್ಟಕ್ಕೆ ನೆರವಾಗುತ್ತೇವೆ. ಫೋನ್ ನಂಬರ್ ನೀಡಿದ್ದು, ಯಾವುದೇ ಸಮಸ್ಯೆ, ಸಂಕಷ್ಟಗಳು ಬಂದರು ಕರೆ ಮಾಡಿ. ನೆರವಾಗುತ್ತೇನೆ ಎಂದು ಧೈರ್ಯ ತುಂಬಿದ್ದಾರೆ.
ಪ್ರವೀಣ್ ನೆಟ್ಟಾರು ಹಂತಕರನ್ನು ಶೀಘ್ರವೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.