ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ ಐಎ ಅಧಿಕೃತವಾಗಿ ತನಿಖೆ ಆರಂಭಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೀಡು ಬಿಟ್ಟಿರುವ ಎನ್ ಐ ಎ ಅಧಿಕಾರಿಗಳ ತಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದೆ. ದೆಹಲಿಯ ಎನ್ ಐ ಎ ಕಚೇರಿಯಲ್ಲಿ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದೆ. ಬಂಧಿತರು ಸೇರಿದಂತೆ ನಾಪತ್ತೆಯಾದವರ ವಿರುದ್ಧ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 302, 34 ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಪುತ್ತೂರಿನಲ್ಲಿ ಬೀಡು ಬಿಟ್ಟಿರುವ ಎನ್ ಐ ಎ ಅಧಿಕಾರಿಗಳ ತಂಡ ಬೆಳ್ಳಾರೆ ಪೊಲೀಸರಿಂದ ಕೇಸ್ ಫೈಲ್ ಪಡೆದು ತನಿಖೆ ನಡೆಸಿದೆ.