ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ. ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಪರ್ಲಿಯಾದಲ್ಲಿನ ರಿಯಾಜ್ ಮನೆ ಮೇಲೆ ಎನ್ಐಎ ದಾಳಿ ನಡೆಸಿದ್ದು, ಈ ವೇಳೆ ರಿಯಾಜ್ ಮೊಬೈಲ್ ವಶಕ್ಕೆ ಪಡೆದು ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ರಿಯಾಜ್ ಮನೆ ಮೆಲೆ ದಾಳಿ ನಡೆಸುತ್ತಿದ್ದಂತೆ ಎಸ್.ಡಿ.ಪಿ.ಐ.ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೋ ಬ್ಯಾಕ್ ಎನ್ಐಎ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಪುತ್ತೂರು ಹಾಗೂ ಸುಳ್ಯ ತಾಲೂಕಿನ 32 ಕಡೆಗಳಿಗೆ ದಾಳಿ ನಡೆಸಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಸಾಕ್ಷಿಗಳನ್ನು ಸಂಗ್ರಹಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಎಸ್.ಡಿ.ಪಿ.ಐ. ಮುಖಂಡನ ಮನೆ ಮೇಲೆ ದಾಳಿ ನಡೆಸಲಾಗಿದೆ.