alex Certify BIG NEWS: ಪ್ರವೀಣ್ ನೆಟ್ಟಾರ್ ತಂದೆ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರವೀಣ್ ನೆಟ್ಟಾರ್ ತಂದೆ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಮಂಗಳವಾರದಂದು ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೊಳಗಾಗಿದ್ದ ಪ್ರವೀಣ್ ನೆಟ್ಟಾರ್ ಅವರ ತಂದೆ ಶೇಖರ್ ಪೂಜಾರಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡು ಆಘಾತಕ್ಕೊಳಗಾಗಿರುವ ಪ್ರವೀಣ್ ತಂದೆ ಈ ಮೊದಲೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಈಗ ಅವರ ಆರೋಗ್ಯ ಇನ್ನಷ್ಟು ಬಿಗಡಾಯಿಸಿದೆ.

ಈ ಹಿನ್ನಲೆಯಲ್ಲಿ ಅವರನ್ನು ಆಂಬುಲೆನ್ಸ್ ಮೂಲಕ ಬೆಳ್ಳಾರೆಯ ಭಾರದ್ವಾಜ್ ಆಸ್ಪತ್ರೆಗೆ ಕುಟುಂಬಸ್ಥರು ಕರೆದೊಯ್ದಿದ್ದಾರೆ. ವೈದ್ಯರು ತಕ್ಷಣವೇ ಚಿಕಿತ್ಸೆ ಆರಂಭಿಸಿದ್ದು, ಇದಕ್ಕೆ ಶೇಖರ್ ಪೂಜಾರಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...