ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಸದಸ್ಯ ಎಂ.ಕೆ. ಪ್ರಾಣೇಶ್ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು, ಪ್ರಸ್ತಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಹೇಳಿಕೊಡಲಾಗುವುದು ಎಂದರು.
ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಬಗ್ಗೆ ಸಮಿತಿ ರಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.