ಕಲಬುರ್ಗಿ: ಪ್ರಸಿದ್ಧ ದೇವಾಲಯದ ಹೆಸರಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ ಅರ್ಚಕರೇ ಭಕ್ತರನ್ನು ಸುಲಿಗೆ ಮಾಡುತ್ತಿರುವ ಘಟನೆ ಕಲಬುರ್ಗಿಯ ಗಾಣಗಾಪುರ ದೇವಾಲಯದಲ್ಲಿ ಬೆಳಕಿಗೆ ಬಂದಿದೆ.
ಕಲಬುರ್ಗಿ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಗಾಣಗಾಪುರದ ದತ್ತಾತ್ರೇಯ ದೇಗುಲ ಹೆಸರಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಲಾಗಿದೆ. ಕಲಬುರ್ಗಿ ಜಿಲ್ಲಾಧಿಕಾರಿ ದೇಗುಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಅಧಿಕೃತ ವೆಬ್ ಸೈಟ್ ಜತೆಗೆ 7ರಿಂದ 8 ನಕಲಿ ವೆಬ್ ಸೈಟ್ ಸೃಷ್ಟಿಸಿ ಭಕ್ತರಿಂದ ದೇಣಿಗೆ ವಸೂಲಿ ಮಾಡಲಾಗುತ್ತಿದೆ.
ದೇಗುಲಕ್ಕೆ ಸೇರಿದ್ದ ಭಕ್ತರ ಕಾಣಿಕೆ ಅರ್ಚಕರ ಹುಂಡಿಗೆ ಹಾಕಲಾಗುತ್ತಿರುವುದು ಬೆಳಕಿಗೆ ಬಂದಿದೆ. ನಕಲಿ ವೆಬ್ ಸೈಟ್ ಸೃಷ್ಟಿ, ಕಾಣಿಕೆ ವಿಚಾರವಾಗಿ ತನಿಖೆ ನಡೆಸುವಂತೆ ಗಾಣಗಾಪುರ ದೇವಸ್ಥಾನ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.