alex Certify BIG NEWS: ಪ್ರಸಿದ್ಧ ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್ ಸೈಟ್; ಭಕ್ತರಿಂದ ದೇಣಿಗೆ ಹೆಸರಲ್ಲಿ ಹಣ ಸಂಗ್ರಹಿಸಿ ಮೋಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಸಿದ್ಧ ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್ ಸೈಟ್; ಭಕ್ತರಿಂದ ದೇಣಿಗೆ ಹೆಸರಲ್ಲಿ ಹಣ ಸಂಗ್ರಹಿಸಿ ಮೋಸ

ಕಲಬುರ್ಗಿ: ಪ್ರಸಿದ್ಧ ದೇವಾಲಯದ ಹೆಸರಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ ಅರ್ಚಕರೇ ಭಕ್ತರನ್ನು ಸುಲಿಗೆ ಮಾಡುತ್ತಿರುವ ಘಟನೆ ಕಲಬುರ್ಗಿಯ ಗಾಣಗಾಪುರ ದೇವಾಲಯದಲ್ಲಿ ಬೆಳಕಿಗೆ ಬಂದಿದೆ.

ಕಲಬುರ್ಗಿ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಗಾಣಗಾಪುರದ ದತ್ತಾತ್ರೇಯ ದೇಗುಲ ಹೆಸರಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಲಾಗಿದೆ. ಕಲಬುರ್ಗಿ ಜಿಲ್ಲಾಧಿಕಾರಿ ದೇಗುಲಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಅಧಿಕೃತ ವೆಬ್ ಸೈಟ್ ಜತೆಗೆ 7ರಿಂದ 8 ನಕಲಿ ವೆಬ್ ಸೈಟ್ ಸೃಷ್ಟಿಸಿ ಭಕ್ತರಿಂದ ದೇಣಿಗೆ ವಸೂಲಿ ಮಾಡಲಾಗುತ್ತಿದೆ.

ದೇಗುಲಕ್ಕೆ ಸೇರಿದ್ದ ಭಕ್ತರ ಕಾಣಿಕೆ ಅರ್ಚಕರ ಹುಂಡಿಗೆ ಹಾಕಲಾಗುತ್ತಿರುವುದು ಬೆಳಕಿಗೆ ಬಂದಿದೆ. ನಕಲಿ ವೆಬ್ ಸೈಟ್ ಸೃಷ್ಟಿ, ಕಾಣಿಕೆ ವಿಚಾರವಾಗಿ ತನಿಖೆ ನಡೆಸುವಂತೆ ಗಾಣಗಾಪುರ ದೇವಸ್ಥಾನ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...