ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಪ್ರಿಯಾಂಕ್ ಖರ್ಗೆ ಅವರ ಕೀಳು ಅಭಿರುಚಿಯನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಇಂತಹ ಹೇಳಿಕೆ ನೀಡುವ ಮೂಲಕ ಇಡೀ ಮಹಿಳಾ ಕುಲಕ್ಕೆ ಪ್ರಿಯಾಂಕ್ ಖರ್ಗೆ ಅವಮಾನ ಮಾಡಿದ್ದಾರೆ. ಯಾವ ಮಹಿಳೆಯೂ ಪ್ರಿಯಾಂಕ್ ಖರ್ಗೆ ಹೇಳಿಕೆ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಅವರದ್ದೇ ಸಕಾರ ಇದ್ದಾಗ ಸಾಕಷ್ಟು ಹಗರಣ, ಭ್ರಷ್ಟಾಚಾರ ನಡೆದಿತ್ತು. ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸಚಿವರಾಗಿದ್ದಾಗ ಭ್ರಷ್ಟಾಚಾರ ನಡೆದಿತ್ತು. ಪ್ರಿಯಾಂಕ್ ಖರ್ಗೆಗೆ ಮರ್ಯಾದೆ ಇದ್ದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಬಾರದು ಎಂದು ಗುಡುಗಿದರು.