ಹುಬ್ಬಳ್ಳಿ: ರಾಜ್ಯಾದ್ಯಂತ ನಾಳೆಯಿಂದ ಪ್ರೌಢಶಾಲೆಗಳು ಆರಂಭವಾಗಲಿವೆ. ಶಾಂತಿಯುತವಾಗಿ ತರಗತಿಗಳು ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಶಾಲಾ-ಕಾಲೇಜುಗಳ ಆರಂಭಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ನಾಳೆಯಿಂದ ಪ್ರೌಢಶಾಲೆಗಳನ್ನು ಆರಂಭಿಸಲಾಗುತ್ತದೆ. ಅದನ್ನು ನೋಡಿಕೊಂಡು ಕಾಲೇಜು ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನಂತೆ ಸೌಹಾರ್ದಯುತವಾಗಿ ಶಾಲೆ-ಕಾಲೇಜುಗಳು, ತರಗತಿಗಳು ನಡೆಯಬೇಕು ಎಂಬುದು ನಮ್ಮ ಉದ್ದೇಶ ಎಂದರು.
ಪೋಷಕರಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಶಾಂತಿ ಸಭೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಯಾರು ಕೂಡ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವಂತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿಯೂ ಹಾಕುವ ಸಂದೇಶಗಳ ಮೇಲೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.