alex Certify BIG NEWS: ಪ್ರೌಢಶಾಲೆಗಳನ್ನು ನೋಡಿಕೊಂಡು ಕಾಲೇಜುಗಳ ಆರಂಭ; ಸೋಷಿಯಲ್ ಮೀಡಿಯಾ ಪೋಸ್ಟ್ ಗಳ ಮೇಲೂ ನಿಗಾ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರೌಢಶಾಲೆಗಳನ್ನು ನೋಡಿಕೊಂಡು ಕಾಲೇಜುಗಳ ಆರಂಭ; ಸೋಷಿಯಲ್ ಮೀಡಿಯಾ ಪೋಸ್ಟ್ ಗಳ ಮೇಲೂ ನಿಗಾ ಎಂದ ಸಿಎಂ

ಹುಬ್ಬಳ್ಳಿ: ರಾಜ್ಯಾದ್ಯಂತ ನಾಳೆಯಿಂದ ಪ್ರೌಢಶಾಲೆಗಳು ಆರಂಭವಾಗಲಿವೆ. ಶಾಂತಿಯುತವಾಗಿ ತರಗತಿಗಳು ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಶಾಲಾ-ಕಾಲೇಜುಗಳ ಆರಂಭಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ನಾಳೆಯಿಂದ ಪ್ರೌಢಶಾಲೆಗಳನ್ನು ಆರಂಭಿಸಲಾಗುತ್ತದೆ. ಅದನ್ನು ನೋಡಿಕೊಂಡು ಕಾಲೇಜು ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನಂತೆ ಸೌಹಾರ್ದಯುತವಾಗಿ ಶಾಲೆ-ಕಾಲೇಜುಗಳು, ತರಗತಿಗಳು ನಡೆಯಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಪೋಷಕರಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಶಾಂತಿ ಸಭೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಯಾರು ಕೂಡ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವಂತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿಯೂ ಹಾಕುವ ಸಂದೇಶಗಳ ಮೇಲೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...