ಮಂಗಳೂರು: ಸುರತ್ಕಲ್ ನಲ್ಲಿ ಯುವಕ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದ ಕಾರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಪತ್ತೆಯಾಗಿದೆ.
ಫಾಜಿಲ್ ಹತ್ಯೆ ಕೃತ್ಯಕ್ಕೆ ಬಳಸಲಾಗಿದ್ದ ಹ್ಯುಂಡೈ ಇಯಾನ್ KA19MJ ಸಿರೀಸ್ ನ ಕಾರು ಕಾರ್ಕಳದ ಇನ್ನಾ ಗ್ರಾಮದಲ್ಲಿ ಪತ್ತೆಯಾಗಿದೆ. ದುಷ್ಕರ್ಮಿಗಳು ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.
ಕಾರು ಪತ್ತೆಯಾಗಿರುವ ಪ್ರದೇಶಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜುಲೈ 28ರಂದು ರಾತ್ರಿ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಫಾಜಿಲ್ ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಸಿಸಿ ಟಿವಿಯಲ್ಲಿ ಹಂತಕರ ಕೃತ್ಯ ಸೆರೆಯಾಗಿತ್ತು. ಅಲ್ಲದೇ ಕಾರು ಚಾಲಕ ಸೇರಿದಂತೆ ಐವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆಯಾಗಿದ್ದು ಮಹತ್ವ ಪಡೆದುಕೊಂಡಿದೆ.