ಬೆಂಗಳೂರು: ಡಿಜಿ ಹಾಗೂ ಐಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ಮಹತ್ವದ ಸಭೆ ನಡೆಸಲಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಪೊಲೀಸ್ ಆಯುಕ್ತ ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರಿನ ಎಲ್ಲಾ ವಿಭಾಗದ ಡಿಸಿಪಿಗಳು, ಐಪಿಎಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸುಳ್ಳು ಸುದ್ದಿ ಹರಡುವವರ ಸಂಖ್ಯೆ ಹೆಚ್ಚಾಗಿದ್ದು, ಸುಳ್ಳು ಸುದ್ದಿ ಮೂಲ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.