ಕೋಲಾರ: ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಪಂಚಾಯತ್ ಇಒ ವೆಂಕಟೇಶ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಒ ವೆಂಕಟೇಶ್ ಮನೆ ಮೇಲೆ ಏ.24ರಂದು ಲೋಕಾಯುಕ್ತ ದಾಳಿ ನಡೆದಿತ್ತು. ವೆಂಕಟೇಶ್ ಅವರಿಗೆ ಸೇರಿದ 5 ಕಡೆ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಅಕ್ರಮ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.
ಅಕ್ರಮ ಆಸ್ತಿ ಬಗ್ಗೆ ತನಿಖೆ ನಡೆಸಲು ಆರೋಪಿ ಸದರಿ ಹುದ್ದೆಯಲ್ಲಿದ್ದರೆ ಸುಗಮ ತನಿಖೆ ನಡೆಸಲು ಅಡ್ಡಿಯಾಗಬಹುದು ಎಂಬ ಕಾರಣಕ್ಕೆ ತಾಲೂಕು ಪಂಚಾಯತ್ ಇಒ ವೆಂಕಟೇಶ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.