ಮಂಗಳೂರು: ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಬಾಲಕಿಗೆ ಪರಿಚಯದವರೇ ಆಗಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ ಪಿ ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ ರಿಷಿಕೇಶ್, ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಇಬ್ಬರು ಬಾಲಕಿಗೆ ಪರಿಚಯದವರಾಗಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಂತ್ರಸ್ತ ಬಾಲಕಿಗೆ ಮೊದಲೇ ಪರಿಚಯವಿದ್ದರು. ಬಾಲಕಿಯೊಂದಿಗೆ ಆರೋಪಿಗಳಿಬ್ಬರು ಅಶ್ಲೀಲ ಚಾಟಿಂಗ್ ಕೂಡ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
BIG NEWS: ಸಿಡಿ ಪ್ರಕರಣ, ರಮೇಶ ಜಾರಕಿಹೊಳಿಗೆ ಮತ್ತೆ ಶಾಕ್ -ಹೋರಾಟ ಕೈಗೆತ್ತಿಕೊಳ್ಳಲು ಕಾಂಗ್ರೆಸ್ ನಿರ್ಧಾರ
ಅ.8ರಂದು ಬಾಲಕಿಯನ್ನು ಆರೋಪಿಗಳು ಮಂಗಳೂರಿಗೆ ಕರೆಸಿಕೊಂಡಿದ್ದಾರೆ. ಮಾಲ್ ನಲ್ಲಿ ಸುತ್ತಾಡಿ ಬಳಿಕ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿದ್ದರು. ಲಾಡ್ಜ್ ನಲ್ಲಿ ಮೂವರಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬಳಿಕ ಲಾಡ್ಜ್ ಮ್ಯಾನೇಜರ್ ನಿಂದಲೂ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.
ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಲ್ಲಿ ಇಬ್ಬರು ಉಡುಪಿ ಜಿಲ್ಲೆಯ ಕಾಪು ಮೂಲದವರು, ಇನ್ನೋರ್ವ ಕುಂದಾಪುರದ ಲಾಡ್ಜ್ ಮಾಲೀಕ ಹಾಗೂ ದಾವಣಗೆರೆ ಮೂಲದವರಾಗಿದ್ದಾರೆ ಎಂದು ವಿವರಿಸಿದ್ದಾರೆ.