ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ.
ಮೇಲುಕಾಮನಹಳ್ಳಿ ಹೆಲಿಪ್ಯಾಡ್ ಗೆ ಬಂದಿಳಿದ ಪ್ರಧಾನಿ ಮೋದಿ ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ಬಂಡಿಪುರ ಕ್ಯಾಂಪ್ ಗೆ ಆಗಮಿಸಿದರು. ಈ ವೇಳೆ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿದರು. ಬಳಿಕ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದರು.
ಬಳಿಕ ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ಮೋದಿ ಸಫಾರಿ ಆರಂಭಿಸಿದ್ದಾರೆ. ಉದ್ಯಾನವನದಲ್ಲಿ ಸುಮಾರು 2 ತಾಸುಗಳ ಕಾಲ ಸುಮಾರು 20 ಕೀಮೀ ವರೆಗೆ ಸಫಾರಿಯಲ್ಲಿ ಸಂಚರಿಸಲಿದ್ದಾರೆ.