ಮಡಿಕೇರಿ: ಬಂದೂಕಿನಿಂದ ಗುಂಡಿಟ್ಟು ತಂದೆಯೇ ಮಗನನ್ನು ಹತ್ಯೆಗೈದ ಘೋರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ.
ತಂದೆ ನಂದೇಟಿರ ಚಿಟ್ಟಿಯಪ್ಪ, 28 ವರ್ಷದ ಮಗ ನಿರೆನ್ ನನ್ನು ಹತ್ಯೆಗೈದಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಗನನ್ನೇ ಗುಂಡಿಟ್ಟು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.