ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಅವರ ಬಂಧನದ ಬೆನ್ನಲ್ಲೇ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನ ಹಾಗೂ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ಮುರುಘಾ ಶ್ರೀಗಳನ್ನು ಅಮಾನತುಗೊಳಿಸಲಾಗಿದೆ.
ಶನಿವಾರದಂದು ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಈ ಕ್ರಮ ಜರುಗಿಸಲಾಗಿದೆ ಎಂದು ವಿಶ್ವಸ್ಥ ಸಮಿತಿ ಗೌರವ ಕಾರ್ಯದರ್ಶಿ ಪ್ರೊಫೆಸರ್ ಕೆ.ಇ. ರಾಧಾಕೃಷ್ಣ ಮಾಹಿತಿ ನೀಡಿದ್ದಾರೆ.