ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಶಿವಮೊಗ್ಗ 2ನೇ ಜೆ ಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಹರ್ಷ ಹತ್ಯೆ ಪ್ರಕರಣ ತನಿಖೆಗೆ ರಚನೆಗೊಂಡಿದ್ದ ವಿಶೇಷ ಪೊಲೀಸ್ ತಂಡ ನಿನ್ನೆ ಅಬ್ದುಲ್ ರೋಷನ್ ಹಾಗೂ ಜಾಫರ್ ಸಾಧಿಕ್ ಅಲಿಯಾಸ್ ಬದ್ರುದ್ದೀನ್ ಎಂಬ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿತ್ತು. ಈ ಮೂಲಕ ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 2 ಕಾರು, 1 ದ್ವಿಚಕ್ರವಾಹನ ವಶಕ್ಕೆ ಪಡೆಯಲಾಗಿದೆ.
ಮೃತದೇಹಗಳ ಮುಂದೆ ಕಣ್ಣೀರಿಟ್ಟ ಉಕ್ರೇನ್ ಜನತೆ; ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಮನಕಲಕುವ ಫೋಟೋಗಳು
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತ ಎಲ್ಲಾ 10 ಆರೋಪಿಗಳನ್ನು ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ದಿದ್ದಾರೆ.