ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ (NIA) ಶೀಘ್ರ ತನಿಖೆ ಆರಂಭಿಸಲಿದ್ದು, ಎನ್ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.
ಹರ್ಷ ಹತ್ಯೆ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಪ್ರಕರಣವನ್ನು ಎನ್ಐಎ ಗೆ ಹಸ್ತಾಂತರಿಸಿದೆ. ಈ ನಿಟ್ಟಿನಲ್ಲಿ ಪ್ರಕರಣದ ಬಗ್ಗೆ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿರುವ ಎನ್ ಐಎ ಶೀಘ್ರದಲ್ಲಿಯೇ ಶಿವಮೊಗ್ಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಚಲಿಸುತ್ತಿದ್ದ ಬಸ್ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್ ಬಳಿಕ ಖಾಕಿ ಅಲರ್ಟ್
ಫೆ.20ರಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಘಟನೆ ಬಳಿಕ ಹಿಂಸಾಚಾರ ನಡೆದಿತ್ತು. ಹತ್ಯೆ ಪ್ರಕರಣ ಸಂಬಂಧ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.