ಮಂಗಳೂರು: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಮಾಡುವ ನಿಟ್ಟಿನಲ್ಲಿ ನೋಟಿಸ್ ಜಾರಿ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗ ದಳ ಕಾರ್ಯಕರ್ತರನ್ನು ಗಡಿಪಾರು ಮಾಡುವ ನಿಟ್ಟಿನಲ್ಲಿ ನೋಟಿಸ್ ನೀಡಲಾಗಿದ್ದು, ಇಂದು ಮಂಗಳೂರು ಡಿಸಿಪಿ ಎದುರು ಹಾಜರಾಗುವಂತೆ ಸೂಚಿಸಲಾಗಿದೆ.
ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ಮಾಡಿದ್ದ ಮೂವರು ಆರೋಪಿಗಳು, ಸುಲ್ತಾನ್ ಜ್ಯುವೆಲರ್ಸ್ ಬಳಿ ದಾಂಧಲೆ ಪ್ರಕರಣದಲ್ಲಿಯೂ ಭಾಗಿಯಾಗಿದ್ದರು. ನೈತಿಕ ಪೊಲೀಸ್ ಗಿರಿ ಪ್ರಕರಣ ಹಿನ್ನೆಲೆಯಲ್ಲಿ ಸ್ಥಳೀಯ ಠಾಣೆಯ ಇನ್ಸ್ ಪೆಕ್ಟರ್ ಗಳು ಮೂವರನ್ನು ಗಡಿಪಾರಿಗೆ ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.
ಆರೋಪಿಗಳು ಇಂದು ಡಿಸಿಪಿ ಮುಂದೆ ಹಾಜರಾಗಲಿದ್ದು, ಬಳಿಕ ಮೂವರು ಬಜರಂಗ ದಳ ಕಾರ್ಯಕರ್ತರ 1 ವರ್ಷ ಗಡಿಪಾರಿಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.