alex Certify BIG NEWS: ಬಜರಂಗದಳ ವಿಚಾರ ಒಂದು ವಿವಾದವೇ ಅಲ್ಲ; ನನ್ನ ನಿರೀಕ್ಷೆಯಂತೆ ಫಲಿತಾಂಶ ಬರಲಿದೆ ಎಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಜರಂಗದಳ ವಿಚಾರ ಒಂದು ವಿವಾದವೇ ಅಲ್ಲ; ನನ್ನ ನಿರೀಕ್ಷೆಯಂತೆ ಫಲಿತಾಂಶ ಬರಲಿದೆ ಎಂದ ಸಿದ್ದರಾಮಯ್ಯ

ಮೈಸೂರು: ನಾನು ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರಾವಳಿ ಭಾಗದಲ್ಲಿ ಈ ಬಾರಿ ಕಾಂಗ್ರೆಸ್ ಸೀಟು ಹೆಚ್ಚಾಗಲಿದೆ. ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ, ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದರು.

ಈ ಬಾರಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. 130-150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...