alex Certify BIG NEWS: ಬಜರಂಗ ದಳ ಕಾರ್ಯಕರ್ತನ ಹತ್ಯೆಗೆ ಯತ್ನ ಕೇಸ್; ತೀವ್ರಗೊಂಡ ಪ್ರತಿಭಟನೆ; ನಾಳೆ ಸಾಗರ ಪಟ್ಟಣ ಬಂದ್ ಗೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಜರಂಗ ದಳ ಕಾರ್ಯಕರ್ತನ ಹತ್ಯೆಗೆ ಯತ್ನ ಕೇಸ್; ತೀವ್ರಗೊಂಡ ಪ್ರತಿಭಟನೆ; ನಾಳೆ ಸಾಗರ ಪಟ್ಟಣ ಬಂದ್ ಗೆ ಕರೆ

ಸಾಗರ: ಹಾಡಹಗಲೇ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದ್ದು, ಆರೋಪಿ ಬಂಧನಕ್ಕೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಸಾಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಆರೋಪಿ ಸಮೀರ್ ಬಂಧನಕ್ಕೆ ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ನಾಳೆ ಸಾಗರ ಪಟ್ಟಣ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಸಾಗರ ಪಟ್ಟಣದಲ್ಲಿ ಹಾಡಹಗಲೇ ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬುವವರ ಮೇಲೆ ಸಮೀರ್ ಎಂಬಾತ ಮಚ್ಚು ಬೀಸಿದ್ದು, ಸುನೀಲ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...