ನವದೆಹಲಿ: ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಪ್ರತಿಯೊಂದಿಗೆ ವಿತ್ತ ಸಚಿವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ.
ಈ ಬಾರಿಯೂ ಪೇಪರ್ ಲೆಸ್ ಬಜೆಟ್ ಮಂಡನೆ ಮುಂದುವರೆಸಿರುವ ನಿರ್ಮಲಾ ಸೀತಾರಾಮನ್, ಬಜೆಟ್ ಅಂಶಗಳನ್ನೊಳಗೊಂಡ ಟ್ಯಾಬ್ ನೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಡ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿಗಳು ಬಜೆಟ್ ಮಂಡನೆಗೆ ಔಪಚಾರಿಕ ಒಪ್ಪಿಗೆ ನೀಡಿದ್ದಾರೆ.
ಮದುಮಗಳಿಗೆ ಅದ್ಧೂರಿ ಸ್ವಾಗತ ಕೋರಿದ ಒಡಹುಟ್ಟಿದವರು…! ಹೃದಯಸ್ಪರ್ಶಿ ವಿಡಿಯೋ ವೈರಲ್
ಈ ಬಾರಿ ಬಜೆಟ್ ಮೌಲ್ಯ 35 ಲಕ್ಷ ಕೋಟಿ ರೂಪಾಯಿ ದಾಟುವ ಸಾಧ್ಯತೆ ಇದೆ. ಬೆಳಿಗ್ಗೆ 10:30ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ ನಡೆಯಲಿದ್ದು, 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
2020ರಲ್ಲಿ ದಾಖಲೆಯ 160 ನಿಮಿಷ ಬಜೆಟ್ ಮಂಡಿಸಿದ್ದ ನಿರ್ಮಲಾ ಸೀತಾರಾಮನ್, ಈ ಬಾರಿ 90-120 ನಿಮಿಷಗಳ ಕಾಲ ಬಜೆಟ್ ಮಂಡಿಸುವ ಸಾಧ್ಯತೆ ಇದೆ.