ವಿಜಯನಗರ: ಮಾಜಿ ಮುಖ್ಯಮಂತ್ರಿಗಳು, ಸಾಹಿತಿಗಳು, ಸಿನಿಮಾ ನಟರು ಸೇರಿದಂತೆ 61 ಗಣ್ಯ ವ್ಯಕ್ತಿಗಳಿಗೆ ಜೀವ ಬೆದರಿಕೆ ಪತ್ರ ಬಂದಿದೆ.
ಸಾಹಿತಿ ಕುಂ.ವೀರಭದ್ರಪ್ಪನವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು, ಅದರಲ್ಲಿ 61 ಜನರ ಹೆಸರು ಉಲ್ಲೇಖಿಸಲಾಗಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿರುವ ಸಾಹಿತಿ ಕುಂ. ವೀರಭದ್ರಪ್ಪ ಮನೆಗೆ ಈ ಪತ್ರ ಬಂದಿದ್ದು, ಇದು ಅವರಿಗೆ ಬರುತ್ತಿರುವ ಎರಡನೇ ಜೀವ ಬೆದರಿಕೆ ಪತ್ರವಾಗಿದೆ.
ಪತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್,ನಿಜಗುಣಾನಂದ ಸ್ವಾಮೀಜಿ, ನಿಡುಮಾಮಿಡಿ ಶ್ರೀ, ಬಿ.ಕೆ. ಹರಿಪ್ರಸಾದ್, ದಿನೇಶ್ ಗುಂಡೂರಾವ್, ನಟ ಪ್ರಕಾಶ್ ರಾಜ್, ಸಾಹಿತಿ ಕುಂ. ವೀರಭದ್ರಪ್ಪ ಸೇರಿದಂತೆ ಒಟ್ಟು 61 ಜನರಿಗೆ ಜೀವ ಬೆದರಿಕೆ ಹಾಕಲಾಗಿದೆ. ಚಿತ್ರದುರ್ಗದಿಂದ ಈ ಪತ್ರ ಬಂದಿದೆ ಎಂದು ತಿಳಿದುಬಂದಿದೆ. ಜೀವಬೆದರಿಕೆ ಹಿನ್ನೆಲೆಯಲ್ಲಿ ಸಾಹಿತಿ ಕುಂ. ವೀರಭದ್ರಪ್ಪ ರಕ್ಷಣೆ ಕೇಳಿದ್ದಾರೆ.