alex Certify BIG NEWS: ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾದ ನಾದಬ್ರಹ್ಮ ಹಂಸಲೇಖಾ; ಪೊಲೀಸರು ಹಾಗೂ ಕನ್ನಡ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾದ ನಾದಬ್ರಹ್ಮ ಹಂಸಲೇಖಾ; ಪೊಲೀಸರು ಹಾಗೂ ಕನ್ನಡ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖಾ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಪೇಜಾವರ ಶ್ರೀ ಕುರಿತ ಹೇಳಿಕೆ ವಿಚಾರವಾಗಿ ಹಂಸಲೇಖಾ ವಿರುದ್ಧ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಪೊಲೀಸರು ನೋಟೀಸ್ ನೀಡಿದ್ದರು. ಆದರೆ ಅನಾರೋಗ್ಯ ಕಾರಣದಿಂದ ವಿಚಾರಣೆಗೆ ಹಂಸಲೇಖಾ ಹಾಜರಾಗಿರಲಿಲ್ಲ. ಇದೀಗ ಹಂಸಲೇಖಾ ವಿಚಾರಣೆಗೆ ಹಾಜರಾಗಿದ್ದಾರೆ.

ಈ ನಡುವೆ ಬಸವನಗುಡಿ ಪೊಲೀಸ್ ಠಾಣೆ ಎದುರು ಹೈಡ್ರಾಮಾ ನಡೆಯುತ್ತಿದ್ದು, ನಟ ಚೇತನ್ ಕೂಡ ಠಾಣೆಗೆ ಆಗಮಿಸಿದ್ದಾರೆ. ಕನ್ನಡಪರ ಸಂಘಟನೆಗಳು ನಟ ಚೇತನ್ ಪರ ಹಾಗೂ ಹಂಸಲೇಖಾ ಪರ ನಾವಿದ್ದೇವೆ ಎಂದು ಘೋಷಣೆ ಕೂಗುತ್ತಿದ್ದರೆ ಇನ್ನೊಂದೆಡೆ ಭಜರಂಗದಳ ಕಾರ್ಯಕರ್ತರು ಕೂಡ ಠಾಣೆ ಮುಂದೆ ಜಮಾವಣೆಗೊಂಡಿದ್ದು ಹಂಸಲೇಖಾ ವಿರುದ್ಧ ಘೋಷಣೆ ಕೂಗಿದ್ದಾರೆ.

ಠಾಣೆಗೆ ಆಗಮಿಸುತ್ತಿದ್ದ ನಟ ಚೇತನ್ ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...