ಸರ್ಕಾರಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ವಿಜಯಪುರ ಜಿಲ್ಲೆ, ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಈ ಘಟನೆ ನಡೆದಿದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಎದುರಿಗೆ ಬರುತ್ತಿದ್ದ ವೇಳೆ ಒಂದು ಕಾರು ಓವರ್ ಟೇಕ್ ಮಾಡಲು ಹೋದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಮತ್ತೊಂದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅಪಘಾತದ ಬಳಿಕ ಅವರುಗಳು ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.