
ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ನೆಲಮಂಗಲ ಡಿಪೋ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್, ವರ್ಗಾವಣೆ ಮಾಡಿದ್ದಕ್ಕೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ತೀವ್ರ ಅಸ್ವಸ್ಥನಾಗಿರುವ ಜಗದೀಶ್ ನನ್ನು ಆಸ್ಪತ್ರೆಗೆ ದಾಖಲಾಗಿದೆ.
ಈ ನಡುವೆ ಚಾಲಕ ಜಗದೀಶ್ ವರ್ಗಾವಣೆ ಆದೇಶವನ್ನು ರದ್ದು ಪಡಿಸಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಆದಾಗ್ಯೂ ಮಾಜಿ ಸಿಎಂ ಕುಮಾರಸ್ವಾಮಿ ಇದೇ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಲು ಮುಂದಾಗಿದ್ದಾರೆ. ನಿಯಮ 60ರ ಅಡಿ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಸದನದಲ್ಲಿ ವಿಷಯ ಪ್ರಸ್ತಾಪವಾದರೆ ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಸದಸ್ಯರು ಪಟ್ಟು ಹಿಡಿಯಲು ಸಜ್ಜಾಗಿದ್ದಾರೆ.