ವಿಜಯಪುರ: ಯುಗಾದಿ ಹಬ್ಬದ ಸಂದರ್ಭದಲ್ಲೇ ಭೀಕರ ದುರಂತವೊಂದು ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿ ನಡೆದಿದೆ.
ವಿಜಯಪುರದಿಂದ ತಾಳಿಕೋಟೆ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಬಸ್ ನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮನಗೊಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.