
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಸಮೀಪದ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು ಬಸ್ ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.