ಬೆಂಗಳೂರು: ಬಸ್ ಹತ್ತುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದೆ.
ಪಿಜಿ ಓದುತ್ತಿದ್ದ ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಹತ್ತುವಾಗ ಕೆಳಗೆ ಬಿದ್ದ ಶಿಲ್ಪಾ ಮೇಲೆಯೇ ಬಸ್ ಚಲಿಸಿದೆ.
ಗಂಭೀರವಾಗಿ ಗಾಯಗೊಂಡಿರುವ ಶಿಲ್ಪಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.