ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ.
ವೇಗವಾಗಿ ಬಂದ ಬಸ್, ಲಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.