alex Certify BIG NEWS: ಬಾದಾಮಿಯಿಂದಲೇ ಸ್ಪರ್ಧಿಸ್ತೀನಿ; ಸಿದ್ದರಾಮಯ್ಯ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾದಾಮಿಯಿಂದಲೇ ಸ್ಪರ್ಧಿಸ್ತೀನಿ; ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಿಂದ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಬಾದಾಮಿ ಕ್ಷೇತ್ರದ ನೂರಾರು ಬೆಂಬಲಿಗರು ಸಿದ್ದರಾಮಯ್ಯ ನಿವಾಸಕ್ಕೆ ಜಮಾಯಿಸಿದ್ದು, ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಈ ವೇಳೆ ಮುಂದಿನ ಸ್ಪರ್ಧೆ ಕ್ಷೇತ್ರದ ಬಗ್ಗೆ ಸ್ಪಷ್ಟಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಬಾದಾಮಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ಇದರಲ್ಲಿ ಯಾವುದೆ ಅನುಮಾನ ಬೇಡ. ಬಾದಾಮಿ ಜನತೆ ನನ್ನ ಮೇಲೆ ನಂಬಿಕೆಯಿಟ್ಟು ಆರಿಸಿ ತಂದಿದ್ದಾರೆ. ಅವರನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

BIG NEWS: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್

ನಾನು ಚಾಮರಾಜಪೇಟೆಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಕೋಲಾರ, ಕೊಪ್ಪಳ, ಚಾಮರಾಜಪೇಟೆ ಹೀಗೆ ಹಲವು ಕ್ಷೇತ್ರಗಳಿಂದ ನನಗೆ ಸ್ಪರ್ಧಿಸಲು ಕರೆಯುತ್ತಿದ್ದಾರೆ ಆದರೆ ನನ್ನ ಆಯ್ಕೆ ಬಾದಾಮಿ ಕ್ಷೇತ್ರ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಾಗಲೂ ನಾನು ಸ್ಪಷ್ಟಪಡಿಸಿದ್ದೆ. ಮುಂದಿನ ಚುನಾವಣೆಯಲ್ಲಿಯೂ ನಾನು ಬಾದಾಮಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು. ಹಾಗಾಗಿ ಕ್ಷೇತ್ರದ ಜನತೆಗೆ ಯಾವುದೇ ಆತಂಕ ಬೇಡ ನಾನು ಬಾದಾಮಿಯಿಂದಲೇ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ಸಿದ್ದರಾಮಯ್ಯ ಘೋಷಣೆ ಬೆನ್ನಲ್ಲೇ ಬೆಂಬಲಿಗರು ಹರ್ಷೋದ್ಘಾರ ವ್ಯಕ್ತಪಡಿಸಿ ಸಂಭ್ರಮಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...