alex Certify BIG NEWS: ಬಾದಾಮಿಯಿಂದ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ಧತೆ; ಕಿಸ್ ಕಾ ಸಾತ್ ಕಿಸ್ ಕಾ ವಿಕಾಸ್ ’ಬುರುಡೆರಾಮಯ್ಯ’…..?; ವಿಪಕ್ಷ ನಾಯಕನ ವಿರುದ್ಧ ಚಾಟಿ ಬೀಸಿದ BJP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾದಾಮಿಯಿಂದ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ಧತೆ; ಕಿಸ್ ಕಾ ಸಾತ್ ಕಿಸ್ ಕಾ ವಿಕಾಸ್ ’ಬುರುಡೆರಾಮಯ್ಯ’…..?; ವಿಪಕ್ಷ ನಾಯಕನ ವಿರುದ್ಧ ಚಾಟಿ ಬೀಸಿದ BJP

ಬೆಂಗಳೂರು: ನಾನು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರತಿ ವರ್ಷ ಅನುದಾನ ಬಿಡುಗಡೆ ಹೆಚ್ಚಿಸಿದ್ದೆ. ಕೊನೆ ಬಜೆಟ್ ನಲ್ಲಿ 3,100 ಕೋಟಿ ಅನುದಾನ ಬಿಡುಗಡೆ ಮಾಡಿದ್ದೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ ಘಟಕ, ಈರೀತಿ ಸುತ್ತಿ ಬಳಸಿ ಮಾತನಾಡುವ ಬದಲು ಬಹುಸಂಖ್ಯಾತರನ್ನು ತುಳಿದು, ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದ್ದೇನೆ ಅದಕ್ಕೆ ಮುಂದಿನ ಬಾರಿ ವಲಸೆ ಹೋಗುತ್ತಿದ್ದೇನೆ ಎಂದು ನೇರವಾಗಿ ಹೇಳಿ ಎಂದು ಟೀಕಿಸಿದೆ.

ಸರಣಿ ಟ್ವೀಟ್ ಮೂಲಕ ಚಾಟಿ ಬೀಸಿರುವ ಬಿಜೆಪಿ, ಸಿದ್ದರಾಮಯ್ಯ ಬಾದಾಮಿ ಕ್ಷೇತ್ರ ಬಿಟ್ಟು ಚಾಮರಾಜಪೇಟೆಗೆ ವಲಸೆ ಹೋಗಲು ಎಲ್ಲಾ ತಯಾರಿ ನಡೆಸಿದ್ದಾರೆ. ಅದೇ ಕಾರಣಕ್ಕಾಗಿ ಪರೋಕ್ಷವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದೆ.

BIG NEWS: ಸಿ.ಎಂ. ಇಬ್ರಾಹಿಂ ಭೇಟಿಯಾದ HDK; ಜೆಡಿಎಸ್ ಸೇರ್ಪಡೆ ಬಹುತೇಕ ಖಚಿತ

ಸಿದ್ದರಾಮಯ್ಯ ಖಡ್ಗ ಹಿಡಿದಿರುವ ಫೋಟೋ ಹಾಕಿ ಟ್ವೀಟ್ ಮಾಡಿರುವ ಬಿಜೆಪಿ, ಇದೇ ಖಡ್ಗದ ಮೂಲಕ ರಾಜ್ಯದಲ್ಲಿ ಹಿಂದೂಗಳ ಮಾರಣ ಹೋಮ ನಡೆಸುವುದಕ್ಕೆ ಪ್ರೋತ್ಸಾಹ ಕೊಟ್ಟರು. ಒಂದು ವರ್ಗದ ಓಲೈಕೆಗಾಗಿ ಮಾಡಿದ ಪ್ರಹಸನದಿಂದಾಗಿಯೇ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬಾದಾಮಿಗೆ ಓಡುವಂತಾಯಿತು. ಆದರೂ ಬುದ್ಧಿಬರಲಿಲ್ಲ ಎಂದು ಕಿಡಿಕಾರಿದೆ.

ʼ3 ಈಡಿಯಟ್ಸ್‌ʼ ಹಾಗೂ ʼತಲಾಶ್ʼ ಬಳಿಕ ಮತ್ತೊಂದು ಚಿತ್ರದಲ್ಲಿ ಒಂದಾದ ಅಮೀರ್‌ – ಕರೀನಾ

ಈಗ ಬಾದಾಮಿಯಿಂದ ಮತ್ತೆ ವಲಸೆ ಹೋಗಲು ಸಿದ್ದರಾಮಯ್ಯ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಅದಕ್ಕಾಗಿ ಈಗ ಮತ್ತೆ ಓಲೈಕೆ ರಾಜಕಾರಣದ ಹಾದಿ ಹಿಡಿದಿದ್ದಾರೆ. ಈ ಮೂಲಕ ಚಾಮರಾಜಪೇಟೆ ಕ್ಷೇತ್ರಕ್ಕೆ ವಲಸೆ ಹೋಗುವ ಸಿದ್ಧತೆ ನಡೆಸಿದ್ದು ನಿಜವಲ್ಲವೇ? ಸಿದ್ದರಾಮಯ್ಯನವರೇ ಕಿಸ್ ಕಾ ಸಾತ್ ಕಿಸ್ ಕಾ ವಿಕಾಸ್? ಎಂದು ವ್ಯಂಗ್ಯವಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...