ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಮತ್ತೊಮ್ಮೆ ಶಾಸಕ ಜಮೀರ್ ಅಹ್ಮದ್ ಪುನರುಚ್ಛರಿಸಿದ್ದು, ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ ಎಂದು ಹೇಳಿದ್ದಾರೆ.
ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಮೊದಲು ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಿ. ನಿಮ್ಮ ಸಮುದಾಯದ ಮತಗಳನ್ನು ಸೆಳೆಯಿರಿ. ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ, ಪಕ್ಷಕ್ಕಾಗಿ ದುಡಿಯಿರಿ ಎಂದು ಸೂಚಿಸಿದ್ದಾರೆ.
ಯಾವುದೇ ಜಾತಿ, ಒಂದು ಸಮುದಾಯವನ್ನು ನಂಬಿದರೆ ಪಕ್ಷ ಅಧಿಕಾರಕ್ಕೆ ಬರಲ್ಲ. ಮೊದಲು ಬಾಯಿಮುಚ್ಚಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ಸಿಎಂ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.