ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೆಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಕುಟುಂಬದವರನ್ನು ಭೇಟಿಯಾದ ಶಾಸಕ ಜಮೀರ್ ಅಹ್ಮದ್ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಭೇಟಿ ನೀಡಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ಬಾಲಕಿ ಕುಟುಂಬದವರನ್ನು ಭೇಟಿಯಾಗಿ 5 ಲಕ್ಷ ರೂಪಾಯಿ ನೆರವು ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಟ್ಯೂಷನ್ ಕ್ಲಾಸಿಗೆ ಹೋಗಿದ್ದ ಬಾಲಕಿಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಘಟನೆ ಅತ್ಯಂತ ಅಮಾನುಷ ಕೃತ್ಯ. ಇಂತಹ ಕೃತ್ಯವೆಸಗಿದ ಪಾಪಿಯನ್ನು ತುಂಡು ತುಂಡಾಗಿ ಕತ್ತರಿಸಬೇಕು. ಮನುಷ್ಯರು ಯಾರೂ ಮಾಡುವ ಕೆಲಸವಲ್ಲವಿದು. ಇಂತಹ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ರಚನೆ ಮಾಡಬೇಕು ಎಂದು ಆಗ್ರಹಿಸಿದರು.