alex Certify BIG NEWS: ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಕೃತ್ಯವೆಸಗಿದ ಪಾಪಿಯನ್ನು ತುಂಡು ತುಂಡಾಗಿ ಕತ್ತರಿಸಬೇಕು; ಶಾಸಕ ಜಮೀರ್ ಅಹ್ಮದ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ; ಕೃತ್ಯವೆಸಗಿದ ಪಾಪಿಯನ್ನು ತುಂಡು ತುಂಡಾಗಿ ಕತ್ತರಿಸಬೇಕು; ಶಾಸಕ ಜಮೀರ್ ಅಹ್ಮದ್ ಆಕ್ರೋಶ

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿ ಮೆಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಕುಟುಂಬದವರನ್ನು ಭೇಟಿಯಾದ ಶಾಸಕ ಜಮೀರ್ ಅಹ್ಮದ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಭೇಟಿ ನೀಡಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ಬಾಲಕಿ ಕುಟುಂಬದವರನ್ನು ಭೇಟಿಯಾಗಿ 5 ಲಕ್ಷ ರೂಪಾಯಿ ನೆರವು ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಟ್ಯೂಷನ್ ಕ್ಲಾಸಿಗೆ ಹೋಗಿದ್ದ ಬಾಲಕಿಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಘಟನೆ ಅತ್ಯಂತ ಅಮಾನುಷ ಕೃತ್ಯ. ಇಂತಹ ಕೃತ್ಯವೆಸಗಿದ ಪಾಪಿಯನ್ನು ತುಂಡು ತುಂಡಾಗಿ ಕತ್ತರಿಸಬೇಕು. ಮನುಷ್ಯರು ಯಾರೂ ಮಾಡುವ ಕೆಲಸವಲ್ಲವಿದು. ಇಂತಹ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ರಚನೆ ಮಾಡಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...