alex Certify BIG NEWS: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಅರೆಸ್ಟ್

ಹಾಸನ: 14 ವರ್ಷದ ಬಾಲಕಿ ಮೇಲೆ ಕಾಮಾಂಧರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ಮೇಲೆ ತೋಟದ ಮನೆಯ ಮಾಲೀಕ ಹಾಗೂ ಆತನ ಸಂಬಂಧಿ ಗ್ಯಾಂಗ್ ರೇಪ್ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.

ಪೋಷಕರ ದೂರಿನ ಮೇರೆಗೆ ಪೊಲೀಸರು ಮನೆ ಮಾಲೀಕ ಹಾಗೂ ಆತನ ಸಂಬಂಧಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಾಲಕಿ ತೀವ್ರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ ಆಕೆ ಗರ್ಭಿಣಿ ಎಂಬುದು ಗೊತ್ತಾಗಿದೆ. ಸಂತ್ರಸ್ತ ಬಾಲಕಿ ರಕ್ಷಣೆ ಕೋರಿ ಹಾಗೂ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...