ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಸಮನ್ಸ್ ಜಾರಿ ಮಾಡಿದೆ.
ಸೆಪ್ಟೆಂಬರ್ 25ರೊಳಗೆ ಹೇಳಿಕೆ ದಾಖಲಿಸುವಂತೆ ಸೂಚಿಸಲಾಗಿದೆ. ಇತ್ತೀಚೆಗಷ್ಟೇ ದೆಹಲಿಯ ಇಡಿ ಕಚೇರಿಗೆ ಹಾಜರಾಗಿದ್ದ ಜಾಕ್ವೆಲಿನ್, ಸತತ 5 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು.
ಈ ವೇಳೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಿಡುವುದಾಗಿಯೂ ಅಧಿಕಾರಿಗಳು ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಇದೀಗ ಜಾಕ್ವೆಲಿನ್ ಗೆ ಮತ್ತೆ ಇಡಿ ಸಮನ್ಸ್ ಜಾರಿ ಮಾಡಿದೆ.