ಬೆಂಗಳೂರು: ಬೆಳೆಹಾನಿ ಪರಿಹಾರ ನೀಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗದೇ ಮೀನಾಮೇಷ ಎಣಿಸುತ್ತಿರುವ ಕೆಲ ಜಿಲ್ಲಾಧಿಕಾರಿಗಳ ಬೆವರಿಳಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಬಾಸಿಸಮ್ ಬಿಟ್ಟು ವಿವೇಚನೆಯಿಂದ ಕೆಲಸ ಮಾಡುವಂತೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಡಿಸಿಗಳ ಸಭೆಯಲ್ಲಿ ಮಾತನಾಡಿದ ಸಿಎಂ, ಅಧಿಕಾರ ಚಲಾಯಿಸುವುದಷ್ಟೇ ಕೆಲಸವಲ್ಲ, ಪ್ರಾಮಾಣಿಕವಾಗಿ ಜನರ ಸಂಕಷ್ಟಕ್ಕೆ ಸ್ಪಂದಿಸಿ, ತಕ್ಷಣ ಅವರ ಸಮಸ್ಯೆಗಳನ್ನು ನಿವಾರಿಸುವುದು ಕೆಲಸ. ಅಧಿಕಾರಿಗಳು ದರ್ಪ ಬಿಟ್ಟು ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್ ಹಾಕಿದ ಆರೋಗ್ಯ ಇಲಾಖೆ
ಕೆಲ ಜಿಲ್ಲೆಗಳಲ್ಲಿ ಇನ್ನೂ ಬೆಳೆಹಾನಿ ಪರಿಹಾರ ವಿತರಣೆಯಾಗಿಲ್ಲ, ಪರಿಹಾರ ಆಪ್ ನಲ್ಲಿ ಅಪ್ ಲೋಡ್ ಮಾಡಿದ 48 ಗಂಟೆಗಳ ಒಳಗಾಗಿ ಪರಿಹಾರ ನೀಡಬೇಕು. ಆಡಳಿತಾತ್ಮಕ ವಿಚಾರಗಳು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಜನ ಸಾಮಾನ್ಯರಿಗೂ ಯೋಜನೆಗಳು ತಲುಪಬೇಕು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕೆಳ ಹಂತದ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿರಬೇಕು ಎಂಬುದನ್ನು ಬಿಟ್ಟು ವಿನಯತೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.
ಅಧಿಕಾರಿಗಳ ಬೇಜವಾಬ್ದಾರಿಯ ಕಾರ್ಯನಿರ್ವಹಣೆಯಿಂದ ಸರ್ಕಾರಕ್ಕೂ ಕೆಟ್ಟ ಹೆಸರು. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.