
ಬೆಂಗಳೂರು: ಬಿಎಂಟಿಸಿ ಬಸ್ ಗೆ ಮತ್ತಿಬ್ಬರು ಬೈಕ್ ಸವಾರರು ಬಲಿಯಾಗಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದಿದೆ.
ಮಾಗಡಿ ರಸ್ತೆಯ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಂದಿರಾ ಕಾಲೋನಿಯ ಮಂಜುನಾಥ್ (25), ಶಿವರಾಜ್ (29) ಮೃತರು. ಇಬ್ಬರೂ ಬೆಂಗಳೂರಿನ ಉತ್ತರ ತಾಲೂಕಿನ ಗೊಲ್ಲರಹಟ್ಟಿಯ ನಿವಾಸಿಗಳು ಎಂದು ತಿಳಿದುಬಂದಿದೆ.
ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.