ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ್ದಾಳೆ.
ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕಿ ಲಾವ್ಯಾಶ್ರೀ ಬಲಿಯಾಗಿದ್ದಾಳೆ. ಬೆಂಗಳೂರಿನ ಟಿ.ಸಿ.ಪಾಳ್ಯದಿಂದ ಬಟ್ಟರಹಳ್ಳಿಗೆ ಹೋಗುವ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ.
ಪ್ರಿಯದರ್ಶಿನಿ ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಶಾಲೆಯಿಂದ ಬೈಕ್ ನಲ್ಲಿ ಕರೆತರುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಕುಳಿತಿದ್ದ ಮಗಳು ಲಾವ್ಯಾಶ್ರೀ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಸ್ ಲಾವ್ಯಾಶ್ರೀ ಮೇಲೆಯೇ ಹರಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಲಾವ್ಯಾಶ್ರೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಪ್ರಿಯದರ್ಶಿನಿ ಹಾಗೂ ಆಕೆಯ ಮಗ ಯಾಶ್ವಿನ್ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.