ಬೆಂಗಳೂರು: ಕೊರೊನಾ ರೂಪಾಂತರಿ ವೈರಸ್ BF.7 ಕುರಿತು ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡುವ ಮೂಲಕ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. BF.7 ವೈರಸ್ ರಾಜ್ಯದಲ್ಲಿ ಪತ್ತೆಯಾದರೆ ಅಂತಹ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಖಾಸಗಿ ಸುದ್ದಿವಾಹಿನಿಗೆ ತಿಳಿಸಿದ್ದಾರೆ.
ರೂಪಾಂತರಿ ವೈರಸ್ ಪತ್ತೆಯಾದ ಸೋಂಕಿತರನ್ನು ಬೆಂಗಳೂರಿನ ಬೌರಿಂಗ್ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಕಟ್ಟೆಚ್ಚರ ವಹಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಕೋವಿಡ್ ಪ್ರಕರಣಗಳು ಹೆಚ್ಚಾದಲ್ಲಿ ಖಾಸಗಿ ಆಸ್ಪತ್ರೆಗಳೂ ಬೆಡ್ ಲಭ್ಯತೆ ಬಗ್ಗೆ ಸರ್ಕಾರಕ್ಕ್ಕೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.