BIG NEWS: ಬಿಜೆಪಿಗೆ ಜನ ಬೆಂಬಲ ಕಂಡು ಕಾಂಗ್ರೆಸ್ ನವರು ದಿಗ್ಭ್ರಾಂತರಾಗಿದ್ದಾರೆ; ಯಡಿಯೂರಪ್ಪ ಟಾಂಗ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 70 ಸ್ಥಾನಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ
ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿಗೆ ಸಿಗುತ್ತಿರುವ ಜನ ಬೆಂಬಲ ಕಂಡು ಕಾಂಗ್ರೆಸ್ ನಾಯಕರು ದಿಗ್ಭ್ರಾಂತರಾಗಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಕಾಂಗ್ರೆಸ್ ಗೆ ಸಾಧ್ಯವಿಲ್ಲ. ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ. ಅದು ಕನಸಾಗಿಯೇ ಇರಲಿದೆ ಎಂದು ಹೇಳಿದರು.

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಕಾಂಗ್ರೆಸ್ ಆರೋಪವನ್ನು ರಾಜ್ಯದ ಜನತೆ ಒಪ್ಪಲ್ಲ. ಯಾವ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿಪಕ್ಷ ಸ್ಥಾನದಲ್ಲೇ ಇರುತ್ತಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read