BIG NEWS: ಬಿಜೆಪಿಗೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ; ಒಳಗಿನವರು, ಹೊರಗಿನವರು ಎಂಬ ಭೇದ ಬೇಡ; ಈಶ್ವರಪ್ಪಗೆ ಟಾಂಗ್ ನೀಡಿದ ರವಿಕುಮಾರ್

ಬೆಂಗಳೂರು: ಆಪರೇಷನ್ ಕಮಲವೇ ಬಿಜೆಪಿಗೆ ಮುಳುವಾಗಿದೆ. ಕಾಂಗ್ರೆಸ್ ನ ಗಾಳಿ ನಮ್ಮ ಮೇಲು ಬೀಸಿದ್ದರಿಂದ ಪಕ್ಷದಲ್ಲಿ ಶಿಸ್ತು ಕಡಿಮೆಯಾಗಿದೆ ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಂ ಎಲ್ ಸಿ ರವಿಕುಮಾರ್, ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ಪಕ್ಷಕ್ಕೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ರವಿಕುಮಾರ್, ಕಾಂಗ್ರೆಸ್ ನಿಂದ ಬಂದವರಿಂದ ಬಿಜೆಪಿ ಅಧಿಕಾರ ನಡೆಸಿತು. ಹೊರಗಿನವರು, ಒಳಗಿನವರು ಎಂಬ ಭೇದವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಲೋಕಸಭಾ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ಅವಧಿಯ ಹಗರಣಗಳ ತನಿಖೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಅವಧಿಯ ಯಾವುದೇ ವಿಚಾರ ತನಿಖೆ ಮಾಡಲಿ, ಯಾವುದಕ್ಕೂನಾವು ಹೆದರಲ್ಲ, ಎಲ್ಲವನ್ನೂ ಎದುರಿಸುತ್ತೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read