ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರುವ ನಿರೀಕ್ಷೆಯಲ್ಲಿದ್ದ ಬಿಜೆಪಿ ನಾಯಕರಿಗೆ ಶಾಕ್ ಆಗಿದೆ. ಸರ್ಕಾರ ರಚಿಸಲು ಮಿತ್ರ ಪಕ್ಷಗಳ ಸಹಕಾರ ಅಗತ್ಯವಿದ್ದು, ಇದಕ್ಕಾಗಿ ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ.
ಇದರ ಮಧ್ಯೆ ಚುನಾವಣಾ ಸಂದರ್ಭದಲ್ಲಿ ಮಹಾರಾಷ್ಟ್ರದ ಬಿಜೆಪಿ ಮೈತ್ರಿ ಕೂಟದ ನಾಯಕರು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಕುರಿತಂತೆ ಮಾತನಾಡಿದ್ದು ಲೋಕಸಭಾ ಚುನಾವಣೆ ಬಳಿಕ ಈ ಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿದ್ದರು.
ಆದರೆ ಇದೀಗ ಬರುತ್ತಿರುವ ಲೋಕಸಭಾ ಚುನಾವಣೆಯ ಫಲಿತಾಂಶ ನೋಡುತ್ತಿರುವಂತೆ ಕಳೆದ ಬಾರಿಯಂತೆ ಕೇಂದ್ರದಲ್ಲಿ ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವುದು ಅನುಮಾನವಾಗಿದೆ. ಒಂದೊಮ್ಮೆ ಮೈತ್ರಿಕೂಟದ ಜೊತೆ ಸರ್ಕಾರ ರಚಿಸಿದರೆ ಯಾವುದೇ ಪ್ರಮುಖ ನಿರ್ಣಯ ಕೈಗೊಳ್ಳಬೇಕಾದರೂ ಮಿತ್ರ ಪಕ್ಷಗಳ ಸಲಹೆ ಬೇಕಾಗುತ್ತದೆ. ಹೀಗಾಗಿ ಸ್ಪಷ್ಟ ಬಹುಮತ ಹೊಂದಿರುವ ತಮ್ಮ ಸರ್ಕಾರವನ್ನು ಕೆಡವಲು ಬಿಜೆಪಿಗೆ ಸಾಧ್ಯವಿಲ್ಲ ಎಂಬ ವಿಶ್ವಾಸ ಈಗ ರಾಜ್ಯ ಕಾಂಗ್ರೆಸ್ ನಾಯಕರಿಗೆ ಬಂದಿದೆ.