ತುಮಕೂರು: ರಾಜ್ಯದಲ್ಲಿರುವುದು ಭ್ರಷ್ಟ ಬಿಜೆಪಿ ಸರ್ಕಾರ, 40% ಕಮಿಷನ್ ಸರ್ಕಾರ, ಕಾನೂನು ಸುವ್ಯವಸ್ಥೆ ಎಂಬುದು ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಪಾವಗಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿದ ಸಿದ್ದರಾಮಯ್ಯ, ರಾಜ್ಯದಲ್ಲಿರುವ ಬಿಜೆಪಿ ಜನಾಶಿರ್ವಾದದಿಂದ ಸರ್ಕಾರ ರಚನೆ ಮಾಡಿಲ್ಲ, ಹಿಂಬಾಗಿಲಿನಿಂದ ಆಪರೇಷನ್ ಮಾಡಿ ಸರ್ಕಾರ ರಚನೆ ಮಾಡಿದೆ. ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಲೂಟಿ ಬಿಟ್ಟು ಬೇರೇನೂ ಮಾಡಿಲ್ಲ. ವಿಧಾನಸೌಧದ ಗೋಡೆ ಕೂಡ ಲಂಚ ಲಂಚ ಎಂದು ಪಿಸು ಗುಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ನಾನೆಂದೂ ನೋಡಿರಲಿಲ್ಲ. ಭಾರತದ ಇತಿಹಾಸದಲ್ಲೇ ಇಷ್ಟು ಸುಳ್ಳು ಹೇಳುವ ಪ್ರಧಾನಿ ನೋಡಿಲ್ಲ ಎಂದು ಕಿಡಿಕಾರಿದರು.
ಬಿಜೆಪಿ ಚುನಾವಣಾ ಪ್ರಣಾಳಿಕೆ ಬರಿ ಬೋಗಸ್ ಭರವಸೆ. 2018ರಲ್ಲಿ ಬಿಜೆಪಿಯವರು 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಕೇವಲ 55 ಭರವಸೆ ಮಾತ್ರ ಈಡೇರಿಸಿದ್ದರು. ಈಗಲೂ ಬರಿ ಬೋಗಸ್ ಭರವಸೆ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.