ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಸತಿ ಸಚಿವ ವಿ.ಸೋಮಣ್ಣ ಮುನಿಸು, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಸಚಿವ ಸೋಮಣ್ಣ ಮುನಿಸು ಶಮನಕ್ಕೆ ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ ಯತ್ನ ನಡೆಸಿದ್ದಾರೆ ಎನ್ನಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಸಚಿವ ವಿ.ಸೋಮಣ್ಣ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ತಡ ರಾತ್ರಿ ಸಚಿವ ಆರ್.ಅಶೋಕ್, ಸೋಮಣ್ಣ ಅವರನ್ನು ಸಿಎಂ ನಿವಾಸಕ್ಕೆ ಕರೆದೊಯ್ದು ಚರ್ಚೆ ನಡೆಸಿದ್ದು, ಈ ವೇಳೆಯೂ ಸಿಎಂ ಬೊಮ್ಮಾಯಿ ಸಚಿವರ ಮನವೊಲಿಕೆ ಮಾಡಿದ್ದಾರೆ. ಸಂಧಾನ ಮಾತುಕತೆ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.
ಆದರೆ ಪಕ್ಷದೊಳಗಿನ ಕೆಲ ಬೆಳವಣಿಗೆಯಿಂದ ಅಸಮಾಧಾನಗೊಂಡಿರುವ ವಿ.ಸೋಮಣ್ಣ, ಅವರ ನಡೆ ನಿಗೂಢವಾಗಿದೆ.