ಬೆಂಗಳೂರು: ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳುತ್ತಲೇ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ದಿ ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಜನಾರ್ಧನ ರೆಡ್ಡಿ, ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯಲ್ಲಿಯೇ ಮುಂದುವರೆಯುತ್ತೇನೆ ಎಂದು ಹೇಳುತ್ತಲೇ ಹೊಸ ಪಕ್ಷವನ್ನು ರಚಿಸಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ತಿಳಿಸಿದ್ದಾರೆ.
‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿರುವ ಜನಾರ್ಧನ ರೆಡ್ಡಿ, ಗಂಗಾವತಿಯಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ ರಾಜ್ಯಾದ್ಯಂತ ಓಡಾಟ ನಡೆಸಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸಂಘಟನೆ ಮಾಡುತ್ತೇನೆ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಬಳ್ಳಾರಿ ರಾಜಕೀಯಕ್ಕೆ ಹೊಸ ತಿರುವು ನೀಡಿರುವುದೂ ಅಲ್ಲದೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.