ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಬಿಜೆಪಿಯಲ್ಲಿ ಅಡಿಯಿಂದ ಮುಡಿಯವರೆಗೆ ಭ್ರಷ್ಟಾಚಾರ ನಡೆದಿದೆ. ತನಿಖೆಗೆ ಆಗ್ರಹಿಸಿದರೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸರ್ಕಾರದ 40% ಕಮಿಷನ್ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ನಮ್ಮ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪೊಲೀಸರನ್ನು ಪೋಸ್ಟರ್ ತೆಗೆಯುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸರ್ಕಾರದ ವರ್ತನೆಗೆ ಜನ ಬೇಸತ್ತಿದ್ದಾರೆ. ಜನರೇ ರಾಜ್ಯ ಸರ್ಕಾರವನ್ನು ಕಿತ್ತೊಗೆಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಪೋಸ್ಟರ್ ನ್ನು ತೆಗೆಯಲು ಪೊಲೀಸರನ್ನು ಬಳಸಿಕೊಳ್ಳುತ್ತಿರುವ ಸರ್ಕಾರ ಭ್ರಷ್ಟರನ್ನು ಹಿಡಿಯಲು ಯಾಕೆ ಬಳಸಿಕೊಳ್ಳುತ್ತಿಲ್ಲ? ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಶಾಸಕರು ಪೇಸಿಎಂ ಆಂದೋಲನ ನಡೆಸುತ್ತೇವೆ ಎಂದು ಗುಡುಗಿದರು.